ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ (100) ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾಯಿ ಹೀರಾಬೆನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಪ್ರಧಾನಿ ಮೋದಿ ದೆಹಲಿಯಿಂದ ಅಹ್ಮದಾಬಾದ್ ಗೆ ದೌಡಾಯಿಸಿದ್ದಾರೆ. ಯುನ್ ಮೆಹ್ತಾ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ತಾಯಿ ಅವರ ಆರೋಗ್ಯ ವಿಚಾರಿಸಿದರು.
ಅಲ್ಲದೇ ಹೀರಾಬೆನ್ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಖುದ್ದು ಮಾಹಿತಿ ಪಡೆದುಕೊಂಡರು.
ಸಧ್ಯದ ಮಾಹಿತಿ ಪ್ರಕಾರ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಅವರ ಆರೋಗ್ಯ ಸ್ಥಿರವಾಗಿದೆ. ಆತಂಕಪಡುವ ಅಗತ್ಯವಿಲ್ಲ ಎಂದು ಯುನ್ ಮೆಹ್ತಾ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.