
ಆಂಧ್ರಪ್ರದೇಶ : ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ಸಂಜೆ ಆಗಮಿಸಿದ ಪ್ರಧಾನಿಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸ್ವಾಗತ ಕೋರಿದ್ದಾರೆ.
ತಿರುಮಲಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ವಿಐಪಿ ದರ್ಶನ ರದ್ದುಗೊಳಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ. ತಿರುಪತಿ ಮತ್ತು ತಿರುಮಲದಲ್ಲಿ ಭದ್ರತೆಯನ್ನು ತೀವ್ರ ಬಿಗಿಗೊಳಸಲಾಗಿದೆ.