alex Certify 8 ಜನರ ಹತ್ಯೆ ಖಂಡಿಸಿದ ಮೋದಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

8 ಜನರ ಹತ್ಯೆ ಖಂಡಿಸಿದ ಮೋದಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳದ ರಾಮಪುರಹತ್ ನಲ್ಲಿ 8 ಜನರ ಹತ್ಯೆ ಪ್ರಕರಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.

ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಬೇಕಿದೆ ಎಂದು ವರ್ಚುವಲ್ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಆರೋಪಿಗಳಿಗೆ ಶಿಕ್ಷೆಯಾಗಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತದೆ. ಪಶ್ಚಿಮಬಂಗಾಳ ಸರ್ಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಂದು ಅವರು ಹೇಳಿದ್ದು, ನೊಂದ ಕುಟುಂಬಗಳಿಗೆ ನೆರವಿನ ಭರವಸೆ ನೀಡಿದ್ದಾರೆ.

ಟಿಎಂಸಿ ಕಾರ್ಯಕರ್ತನ ಹತ್ಯೆಗೆ ಪ್ರತೀಕಾರವಾಗಿ ಎಂಟು ಜನರನ್ನು ಮನೆಗೆ ಬೆಂಕಿ ಹಚ್ಚಿ ಸಜೀವ ದಹನ ಮಾಡಲಾಗಿತ್ತು. ಭಿರ್ ಭುಮ್ ಜಿಲ್ಲೆಯ ರಾಮಪುರಹತ್ ನಲ್ಲಿ ಪ್ರಕರಣ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...