alex Certify ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕೆ ಪ್ರಾರ್ಥಿಸಿ ಧರ್ಮಸ್ಥಳದಲ್ಲಿ ಮೃತ್ಯುಂಜಯ ಯಾಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕೆ ಪ್ರಾರ್ಥಿಸಿ ಧರ್ಮಸ್ಥಳದಲ್ಲಿ ಮೃತ್ಯುಂಜಯ ಯಾಗ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಶಾಸಕ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ಮಹಾಮೃತ್ಯುಂಜಯ ಯಾಗ ನಡೆಸಲಾಗಿದೆ.

ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ನೇತೃತ್ವದಲ್ಲಿ ಮಹಾಯಾಗ ನಡೆಸಲಾಗಿದ್ದು, ವಿವಿಧೆಡೆಯಿಂದ 108 ಅರ್ಚಕರು ಯಾಗದಲ್ಲಿ ಭಾಗಿಯಾಗಿದ್ದರು. ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮ ಮೊದಲಾದ ಪೂಜಾ ಕಾರ್ಯಗಳು ನೆರವೇರಿದವು.

ಈ ಯಾಗದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್,  ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಹಾಗೂ ಪ್ರಮುಖ ನಾಯಕರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...