alex Certify ಭಾರತದಲ್ಲಿ ಹಮಾಸ್ ಮಾದರಿ ದಾಳಿ ಆಗದಿರಲು ಮೋದಿ ಮತ್ತೆ ಪ್ರಧಾನಿಯಾಗಬೇಕು: ಯತ್ನಾಳ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲಿ ಹಮಾಸ್ ಮಾದರಿ ದಾಳಿ ಆಗದಿರಲು ಮೋದಿ ಮತ್ತೆ ಪ್ರಧಾನಿಯಾಗಬೇಕು: ಯತ್ನಾಳ್

ಚಾಮರಾಜನಗರ: ಬಿಜೆಪಿಯಲ್ಲಿ ವಿ. ಸೋಮಣ್ಣ ಅವರಿಗೆ ದೊಡ್ಡ ಭವಿಷ್ಯವಿದೆ. ಅವರ ಕೊಡುಗೆ ದೊಡ್ಡದಿದೆ. ಹೀಗಾಗಿ ಹೈಕಮಾಂಡ್ ಬರ ಅಧ್ಯಯನ ತಂಡದಲ್ಲಿ ಅವರಿಗೆ ಸ್ಥಾನ ಕೊಟ್ಟಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಿದರೆ ರಾಜ್ಯಾಧ್ಯಕ್ಷ ಆಗಬಹುದು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ವಿ. ಸೋಮಣ್ಣ ಕಡೆಗಣನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ ಎಂಬ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ತಮ್ಮಲ್ಲಿರುವ 136 ಶಾಸಕರನ್ನು ಸಮಾಧಾನಪಡಿಸಬೇಕಿದೆ. ಬಿಜೆಪಿ ಬಿಟ್ಟು ಯಾರಾದರೂ ಕಾಂಗ್ರೆಸ್ ಗೆ ಹೋದ್ರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಹಗಲಿರುಳು ದುಡಿಯಬೇಕಿದೆ. ಇಸ್ರೇಲ್ ನಲ್ಲಿ ಆಗಿರುವ ಹಮಾಸ್ ಮಾದರಿ ದಾಳಿ ಭಾರತದಲ್ಲಿ ಆಗಬಾರದು. 2024ಕ್ಕೆ ನರೇಂದ್ರ ಮೋದಿ ದೇಶಕ್ಕೆ ಮತ್ತೆ ಅವಶ್ಯಕತೆ ಇದೆ ಎಂದು ಯತ್ನಾಳ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...