ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ವಿಧಿವಶರಾಗಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿರು ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಶತಾಯುಷಿಯಾಗಿದ್ದರು. ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 102 ವರ್ಷದ ಹೀರಾ ಬೆನ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 1920 ಮೆಹ್ಸಾನ ಜಿಲ್ಲೆಯ ವಿಸ್ ನಗರದಲ್ಲಿ ಅವರು ಜನಿಸಿದ್ದರು. ದಾಮೋದರ ದಾಸ್ ಅವರ ಮದುವೆಯಾಗಿದ್ದ ಹೀರಾಬೆನ್ ಅವರಿಗೆ 6 ಜನ ಮಕ್ಕಳಿದ್ದಾರೆ.
ಐವರು ಪುತ್ರರು, ಓರ್ವ ಪುತ್ರಿಯನ್ನು ಹೀರಾ ಬೆನ್ ಅಗಲಿದ್ದಾರೆ. ಎರಡು ದಿನಗಳ ಹಿಂದೆ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯವರ ಆರೋಗ್ಯ ವಿಚಾರಿಸಿದ್ದರು.