ನವದೆಹಲಿ: ಐತಿಹಾಸಿಕ ನಾರಿ ಶಕ್ತಿ ವಂದನಾ ಮಹಿಳಾ ಮೀಸಲಾತಿ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ನೂತನ ಸಂಸತ್ ಭವನದಲ್ಲಿ ಇಂದು ಬೆಳಗ್ಗೆಯಿಂದ ಮಹಿಳಾ ಮೀಸಲಾತಿ ವಿಧೇಕಕ್ಕೆ ಸಂಬಂಧಿಸಿದಂತೆ 8 ಗಂಟೆಗಳ ಕಾಲ ಚರ್ಚೆ ನಡೆದು, ಸ್ಪೀಕರ್ ಓಂ ಬಿರ್ಲಾ ಅವರು ಮತಕ್ಕೆ ಹಾಕಿದ್ದಾರೆ.
ಮಹಿಳಾ ಮೀಸಲಾತಿ ವಿಧೇಯಕ ಮೇಲೆ ಸದಸ್ಯರು ಮತದಾನ ಮಾಡಿದ್ದಾರೆ. ನೂತನ ಸಂಸತ್ ಭವನದಲ್ಲಿ ಕಲಾಪ ಆರಂಭವಾದ ಎರಡನೇ ದಿನವೇ ಮಹಿಳಾ ಮೀಸಲಾತಿ ವಿಧೇಯಕ ಮೇಲೆ ಮತದಾನ ನಡೆದಿದ್ದು, ಭಾರಿ ಬಹುಮತದೊಂದಿಗೆ ಅಂಗೀಕಾರಗೊಂಡಿದೆ.
ವಿಧೇಯಕದ ವಿರುದ್ಧ ಇಬ್ಬರು ಸಂಸದರು, ಪರವಾಗಿ 454 ಸಂಸದರು ಮತದಾನ ಮಾಡಿದ್ದಾರೆ. ಇದರೊಂದಿಗೆ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಗೊಂಡಿದೆ. ಇದರೊಂದಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ.