alex Certify ನಾಸಿಕ್ ದೇವಾಲಯದಲ್ಲಿ ನೆಲ ಒರೆಸಿದ ಮೋದಿ: ರಾಮ ಮಂದಿರ ಉದ್ಘಾಟನೆಗೆ ಮುನ್ನ ದೇಗುಲಗಳ ಸ್ವಚ್ಛತಾ ಅಭಿಯಾನಕ್ಕೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಸಿಕ್ ದೇವಾಲಯದಲ್ಲಿ ನೆಲ ಒರೆಸಿದ ಮೋದಿ: ರಾಮ ಮಂದಿರ ಉದ್ಘಾಟನೆಗೆ ಮುನ್ನ ದೇಗುಲಗಳ ಸ್ವಚ್ಛತಾ ಅಭಿಯಾನಕ್ಕೆ ಕರೆ

ಭಾರತದ ಅತಿ ಉದ್ದದ ಸಮುದ್ರ ಸೇತುವೆ 21.8 ಕಿಲೋಮೀಟರ್ ಉದ್ದದ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್(MTHL), ಯನ್ನು ಉದ್ಘಾಟಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ನಾಸಿಕ್‌ ನಲ್ಲಿರುವ ಕಾಲಾರಾಮ್ ದೇವಸ್ಥಾನದಲ್ಲಿ ಶುಕ್ರವಾರ ನಡೆದ ‘ಸ್ವಚ್ಛತಾ ಅಭಿಯಾನ’ದಲ್ಲಿ ಭಾಗವಹಿಸಿದ್ದರು.

ಪ್ರಧಾನಿ ಮೋದಿ ಅವರು ಕಲಾರಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಂತ ಏಕನಾಥ್ ಮರಾಠಿಯಲ್ಲಿ ಬರೆದ ‘ಭಾವಾರ್ಥ ರಾಮಾಯಣ’ ಶ್ಲೋಕಗಳನ್ನು ಆಲಿಸಿದರು.

ಭಗವಾನ್ ರಾಮನು ಕೇವಲ 1.5 ನಿಮಿಷಗಳಲ್ಲಿ 14,000 ರಾಕ್ಷಸರನ್ನು ಕೊಂದನೆಂದು ನಂಬಲಾಗಿದೆ. ರಾಮ ರಾಕ್ಷಸರಿಗಾಗಿ ‘ಕಾಲ'(ಸಾವು) ಆಗಿ ಬಂದ ಕಾರಣ ಈ ದೇವಾಲಯವನ್ನು ‘ಕಾಲಾರಾಮ್’ ಎಂದು ಕರೆಯಲಾಗುತ್ತದೆ.

ಇದಕ್ಕೂ ಮುನ್ನ ನಾಸಿಕ್‌ನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಪುತ್ಥಳಿಗೆ ಮೋದಿ ಪುಷ್ಪ ನಮನ ಸಲ್ಲಿಸಿದರು.

ನಂತರ, ನಾಸಿಕ್‌ನ ತಪೋವನ ಮೈದಾನದಲ್ಲಿ ರಾಷ್ಟ್ರೀಯ ಯುವ ಮಹೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೆ ಮುನ್ನ ದೇಶಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳುವಂತೆ ಜನರಿಗೆ ಮನವಿ ಮಾಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...