ನವದೆಹಲಿ; ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು 71ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಯಲ್ಲಿ ಬಿಜೆಪಿ ದೇಶಾದ್ಯಂತ ಸೇವಾ ದಿವಸ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ದೇಶಾದ್ಯಂತ ಆಚರಿಸಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಇಂದಿನಿಂದ 20 ದಿನಗಳ ಕಾಲ ಸೇವಾ ದಿವಸ್ ಕಾರ್ಯಕ್ರಮದಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. 20 ದಿನಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದ ಕೋವಿಡ್ ಲಸಿಕೆ ನೀಡಲು ಕೇಂದ್ರ ಆರೋಗ್ಯ ಇಲಾಖೆ ಯೋಜನೆ ಹಮ್ಮಿಕೊಂಡಿದೆ.
BIG BREAKING: 3ನೇ ಅಲೆ ಆತಂಕದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ
ಈ ನಡುವೆ ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನದಂದೇ ಕಾಂಗ್ರೆಸ್ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಪ್ರಧಾನಿ ಮೋದಿ ನೀಡಿದ್ದ ಉದ್ಯೋಗ ಸೃಷ್ಟಿ ಭರವಸೆಗಳು ಸುಳ್ಳಾಗಿದ್ದು, ದೇಶದಲ್ಲಿ ಯುವಜನತೆ ನಿರುದ್ಯೋಗಿಗಳಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುವುದಾಗಿ ಕಾಂಗ್ರೆಸ್ ಹೇಳಿದೆ.