ನವದೆಹಲಿ: ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ.
ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೊದಲಾದ ನಾಯಕರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಸಂಭ್ರಮಾಚರಣೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮತದಾರರ ಆಶೀರ್ವಾದದಿಂದ ಐತಿಹಾಸಿಕ ಗೆಲುವು ಸಿಕ್ಕಿದೆ ಎಂದರು. ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಪಕ್ಷ ಪ್ರಚಂಡ ಗೆಲುವು ಸಾಧಿಸಿದೆ. ಮತದಾರರ ಆಶೀರ್ವಾದದಿಂದ ಐತಿಹಾಸಿಕ ಗೆಲುವು ಸಿಕ್ಕಿದೆ. ಗೆಲುವಿಗೆ ಕಾರಣರಾದ ಜನರಿಗೆ ನಮಸ್ಕರಿಸುತ್ತೇನೆ. ಗುಜರಾತ್ ನ ಪ್ರತಿಯೊಬ್ಬ ಕಾರ್ಯಕರ್ತರು ಚಾಂಪಿಯನ್ ಗಳು. ಅವರ ಪರಿಶ್ರಮವೇ ಗೆಲುವಿಗೆ ಕಾರಣ. ಇಂತಹ ಐತಿಹಾಸಿಕ ಗೆಲುವಿಗೆ ಕಾರ್ಯಕರ್ತರೇ ಕಾರಣ ಎಂದು ಹೇಳಿದ್ದಾರೆ.
ಅಭಿವೃದ್ಧಿ ರಾಜಕಾರಣಕ್ಕೆ ಜನತೆ ಆಶೀರ್ವಾದ ಮಾಡಿದ್ದಾರೆ. ಇದೇ ವೇಗದಲ್ಲಿ ಅಭಿವೃದ್ಧಿ ಕಾರ್ಯಗಳು ಮುಂದುವರೆಯಲಿವೆ. ಚುನಾವಣಾ ಆಯೋಗಕ್ಕೂ ಅಭಿನಂದನೆ ಸಲ್ಲಿಸುವೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಮತದಾರರಿಗೂ ಆಭಾರಿಯಾಗಿದ್ದೇನೆ. ಉತ್ತರ ಪ್ರದೇಶ, ಬಿಹಾರ ಉಪಚುನಾವಣೆಯಲ್ಲಿಯೂ ಬಿಜೆಪಿ ಜಯಗಳಿಸಿದೆ. ಗೆಲುವಿಗೆ ಕಾರಣರಾದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಧನ್ಯವಾದ ಹೇಳುತ್ತೇನೆ. ಹಿಮಾಚಲ ಪ್ರದೇಶದಲ್ಲಿ ಅತಿ ಕಡಿಮೆ ಅಂತರದಲ್ಲಿ ಅನೇಕ ಅಭ್ಯರ್ಥಿಗಳು ಪರಾಭವಗೊಂಡಿದ್ದಾರೆ ಎಂದರು.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋತರೂ ಅಭಿವೃದ್ಧಿಗೆ ನಾವು ತಾರತಮ್ಯ ಮಾಡುವುದಿಲ್ಲ. ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಜನಪರ ಕಾರ್ಯಗಳನ್ನು ಮುಂದುವರೆಸುತ್ತೇವೆ. ಗುಜರಾತ್ ಇತಿಹಾಸದಲ್ಲೇ ಇಂದಿನ ಗೆಲುವು ದಾಖಲೆಯಾಗಿದೆ ಎಂದರು.
ಕೇವಲ ಬಿಜೆಪಿ ಮೇಲೆ ಮಾತ್ರ ದೇಶದ ಜನರ ಭರವಸೆ ಇದೆ ಬಿಜೆಪಿ ನೇತೃತ್ವದ ಸರ್ಕಾರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಯುವಕರು ಜಾತಿವಾದದ ರಾಜಕಾರಣಕ್ಕೆ ಮನ್ನಣೆ ನೀಡಿಲ್ಲ ಗುಜರಾತ್ ನಲ್ಲಿ ಬಿಜೆಪಿಗೆ 7ನೇ ಸಲ ಐತಿಹಾಸಿಕ ಗೆಲುವು ಸಿಕ್ಕಿದೆ ಅಭಿವೃದ್ಧಿ ಕಾರ್ಯಗಳಿಗೆ ಜನ ಮತ ನೀಡಿದ್ದಾರೆ ಇದಕ್ಕೆ ಪ್ರತಿ ಕಾರ್ಯಕರ್ತರ ಕ್ಷಮಾ ಕಾರಣ ಎಂದರು