alex Certify BIG NEWS: ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಅರಮನೆ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

ಭೋಪಾಲ್ ನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯ ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ಮಂಡಕಳ್ಳಿ ಏರ್ ಪೋರ್ಟ್ ನಿಂದ ಮೈಸೂರಿನ ಮಹಾರಾಜಾ ಕಾಲೇಜು ಮೈದಾನಕ್ಕೆ ತೆರಳಲಿದ್ದು, ಮಹಾರಾಜ ಕಲೇಜು ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಬಳಿಕ ಮೈಸೂರಿನಿಂದ ಮಂಗಳೂರಿಗೆ ಪ್ರಧಾನಿ ಮೋದಿ ತೆರಳಲಿದ್ದು, ಕಡಲ ನಗರಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...