
ನಾಗ್ಪುರ: ಪ್ರಧಾನಿ ನರೇಂದ್ರ ಮೋದಿ ಆರ್.ಎಸ್.ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ. ಈ ಮೂಲಕ ಆರ್.ಎಸ್.ಎಸ್.ಕಚೇರಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್.ಎಸ್.ಎಸ್ ಕೇಂದ್ರ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಸ್ಮೃತಿ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ ಆರ್.ಎಸ್.ಎಸ್ ಸಂಸ್ಥಾಪಕ ಡಾ.ಕೆ.ಬಿ.ಹೆಡಗೇವಾರ್ ಸ್ಮಾರಕ ಮತ್ತು ಸರಸಂಘ ಚಾಲಕ ಗುರೂಜಿ ಎಂ.ಎಸ್.ಗೋಲ್ವಾಲ್ಕರ್ ಸ್ಮಾರಕಕ್ಕೆ ನಮನ ಸಲ್ಲಿಸಿದರು.