ನವದೆಹಲಿ: ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಸ್ವಸಹಾಯ ಗುಂಪುಗಳಿಗೆ ಪ್ರಧಾನಿ ಮೋದಿ ಇಂದು ಹಣ ಬಿಡುಗಡೆ ಮಾಡಲಿದ್ದಾರೆ.
80,000 ಸ್ವಸಹಾಯ ಗುಂಪುಗಳಿಗೆ ತಲಾ 1.10 ಲಕ್ಷ ರೂಪಾಯಿ ಸಮುದಾಯ ಹೂಡಿಕೆ ನಿಧಿಯಾಗಿ ನೀಡಲಾಗುವುದು. 60,000 ಗುಂಪುಗಳಿಗೆ ಆವರ್ತನಿಧಿ ತಲಾ 15,000 ರೂ. ನೀಡಲಾಗುವುದು.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅನೇಕ ಕ್ರಮಕೈಗೊಂಡಿದ್ದಾರೆ. ಸಾವಿರಾರು ಕೋಟಿ ರೂ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಕಾಮಗಾರಿ ಉದ್ಘಾಟನೆಯ ಬಳಿಕ ಇಂದು 1.6 ಲಕ್ಷ ಸ್ವಸಹಾಯ ಗುಂಪುಗಳಿಗೆ ಒಂದು ಸಾವಿರ ಕೋಟಿ ರೂಪಾಯಿ ವರ್ಗಾವಣೆ ಮಾಡಲಿದ್ದಾರೆ. ಇಂದು ಮಧ್ಯಾಹ್ನ ಪ್ರಯಾಗ್ ರಾಜ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಸ್ವಸಹಾಯ ಗುಂಪುಗಳ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ.