ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗೆ ಮತ್ತೊಂದು ಮಹತ್ವದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ವಿವಿಧ ರಾಜ್ಯಗಳ ರಾಜ್ಯಪಾಲರೊಂದಿಗೆ ಸಂವಾದ ನಡೆಸಲಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿ, ಕೋವಿಡ್ ಹೆಚ್ಚಾಗಿರುವ ರಾಜ್ಯಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡು ಸಲಹೆ, ಸೂಚನೆ ನೀಡಿದ್ದರು. ಇದೇ ಮೊದಲ ಬಾರಿಗೆ ರಾಜ್ಯಪಾಲರೊಂದಿಗೆ ಉಪರಾಷ್ಟ್ರಪತಿ ಮತ್ತು ಪ್ರಧಾನಿ ಸಂವಾದ ನಡೆಸಲಿದ್ದಾರೆ.
ಅನೇಕ ರಾಜ್ಯಗಳಲ್ಲಿ ಕೊರೋನಾ ಎರಡನೆಯ ಭಾರಿ ಆತಂಕವನ್ನುಂಟು ಮಾಡಿದೆ. ಹಾಗಾಗಿ ರಾಜ್ಯಪಾಲರ ನಾಯಕತ್ವದಲ್ಲಿ ಮುಖ್ಯಮಂತ್ರಿಯವರ ಮಾರ್ಗದರ್ಶನದಲ್ಲಿ ಎಲ್ಲಾ ರಾಜ್ಯಗಳಲ್ಲಿ ಸರ್ವಪಕ್ಷ ಸಭೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.