alex Certify ಮುನ್ಸಿಪಲ್ ಚುನಾವಣೆಯಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುನ್ಸಿಪಲ್ ಚುನಾವಣೆಯಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಭಾನುವಾರ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ (ಜಿಎಂಸಿ) ಚುನಾವಣೆಗೆ ಮತದಾನ ಮಾಡಿದ್ದಾರೆ.

ಗಾಂಧಿನಗರದಲ್ಲಿರುವ ಮತಗಟ್ಟೆಯಲ್ಲಿ ಅವರು ಮತ ಚಲಾಯಿಸಿದರು. ಹೀರಾಬೆನ್ ಮೋದಿ ಅವರು ನಗರದ ರಾಯ್ಸನ್ ಹಳ್ಳಿಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು.

GMC ಯ 11 ವಾರ್ಡ್‌ಗಳಲ್ಲಿ 44 ಕೌನ್ಸಿಲರ್‌ಗಳನ್ನು ಆಯ್ಕೆ ಮಾಡಲು ಮತದಾ ನಡೆದಿದೆ. ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಮೊದಲ ಪ್ರಮುಖ ಚುನಾವಣೆಯಾಗಿದೆ.

ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಚುನಾವಣೆ ಈಗ ನಿಗದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...