alex Certify ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್: ಕೇಂದ್ರದಿಂದ ‘ಪಿಎಂ ಶ್ರೀ ಶಾಲೆ’ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್: ಕೇಂದ್ರದಿಂದ ‘ಪಿಎಂ ಶ್ರೀ ಶಾಲೆ’ ಆರಂಭ

ನವದೆಹಲಿ: ಕೇಂದ್ರ ಸರ್ಕಾರದಿಂದ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆದಿದ್ದು, ಇವು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಗುಜರಾತ್ ನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಭವಿಷ್ಯತ್ತಿಗಾಗಿ ಸಿದ್ಧಪಡಿಸಲು ಕೇಂದ್ರ ಸರ್ಕಾರ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ. 21ನೇ ಶತಮಾನದಲ್ಲಿ ಮಕ್ಕಳಿಗೆ ಜ್ಞಾನ, ಕೌಶಲ್ಯಾಧಾರಿತ ಶಿಕ್ಷಣ ನೀಡಲು ಈ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿರುವ ‘ಪಿಎಂ ಶ್ರೀ ಶಾಲೆ’ಗಳನ್ನು ಆರಂಭಿಸುವ ಕುರಿತಂತೆ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯ ಸರ್ಕಾರಗಳು ಸಲಹೆ ನೀಡುವಂತೆ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...