![](https://kannadadunia.com/wp-content/uploads/2023/05/c2d619c9-2de3-473c-a724-4a63460f5b0a.jpg)
ತೀವ್ರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವ ನೂತನ ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ರಾಹುಲ್ ಗಾಂಧಿ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂಸತ್ತು ಜನರ ಧ್ವನಿಯಾಗಿದೆ ಆದರೆ ಪ್ರಧಾನಿಯವರು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕದ ರೀತಿಯಲ್ಲಿ ಪರಿಗಣಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಬೆನ್ನಲ್ಲೇ ಈ ರೀತಿ ವಾಗ್ದಾಳಿ ಮಾಡಿದ್ದಾರೆ.
“ಸಂಸತ್ತು ಜನರ ಧ್ವನಿ ! ಪ್ರಧಾನಿಯವರು ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕವೆಂದು ಪರಿಗಣಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.
ಎಐಸಿಸಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಟ್ವೀಟ್ ಮಾಡಿ, “ಹೊಸ ಸಂಸತ್ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಅಂದಿನ ಗೌರವಾನ್ವಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಮಾರಂಭದಿಂದ ದೂರ ಇಡಲಾಗಿತ್ತು. ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬದಿಗಿಡಲಾಗಿದೆ.” ಎಂದಿದ್ದಾರೆ.