ನವದೆಹಲಿ: ಕೇಂದ್ರಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸುವ ಸಾಧ್ಯತೆಯಿದೆ.
ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಯೋಜನೆಯು ಸೆಪ್ಟೆಂಬರ್ 30 ರಂದು ಮುಕ್ತಾಯಗೊಳ್ಳಲಿದೆ, ಯೋಜನೆಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಈ ವರ್ಷದ ಮಾರ್ಚ್ ನಲ್ಲಿ ಕೇಂದ್ರವು ಈಗಾಗಲೇ 80 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಸೆಪ್ಟೆಂಬರ್ 30 ರವರೆಗೆ ಯೋಜನೆಯನ್ನು ಆರು ತಿಂಗಳವರೆಗೆ ವಿಸ್ತರಿಸಿತ್ತು. ಮೊದಲ ಕೋವಿಡ್-19 ಲಾಕ್ ಡೌನ್ ಜಾರಿಗೊಳಿಸಿದ ನಂತರ ಮಾರ್ಚ್ 2020 ರಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಘೋಷಿಸಲಾಗಿತ್ತು.