ನವದೆಹಲಿ: ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ವಾರ್ಷಿಕ ಪ್ರೀಮಿಯಂ ಅನ್ನು ಹೆಚ್ಚಳ ಮಾಡಲಾಗಿದೆ.
ಜೂನ್ 1 ರಿಂದ ಅನ್ವಯವಾಗುವಂತೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯ ವಾರ್ಷಿಕ ಪ್ರೀಮಿಯಂ ಅನ್ನು 330 ರೂಪಾಯಿಯಿಂದ 436 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯ ಪ್ರೀಮಿಯಂ ಮೊತ್ತವನ್ನು 12 ರೂ.ನಿಂದ 20 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಯಡಿ 2 ಲಕ್ಷ ರೂಪಾಯಿವರೆಗೆ ಜೀವವಿಮೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುವುದು.