alex Certify ನವದೆಹಲಿಯ ‘ಜಂತರ್ ಮಂತರ್’ ನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿಯಿಂದ ಇಂದು ಧರಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವದೆಹಲಿಯ ‘ಜಂತರ್ ಮಂತರ್’ ನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿಯಿಂದ ಇಂದು ಧರಣಿ

ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ನಡೆಸಲಿದ್ದು, ಅಖಿಲ ಭಾರತ ನ್ಯಾಯಬೆಲೆ ಅಂಗಡಿಗಳ ಒಕ್ಕೂಟದ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಲಿದ್ದಾರೆ.

ಪ್ರಹ್ಲಾದ್ ಮೋದಿಯವರು ಈ ಒಕ್ಕೂಟದ ಉಪಾಧ್ಯಕ್ಷರಾಗಿದ್ದು, ಇವರೊಂದಿಗೆ ಇತರ ಸದಸ್ಯರುಗಳು ಸಹ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಧರಣಿ ಬಳಿಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಬೇಡಿಕೆ ಪತ್ರವನ್ನು ಸಲ್ಲಿಸಲಾಗುತ್ತದೆ.

ಅಕ್ಕಿ, ಗೋಧಿ ಮತ್ತು ಸಕ್ಕರೆ ನಷ್ಟಕ್ಕೆ ಪರಿಹಾರ ಕೊಡಬೇಕು, ಖಾದ್ಯ ತೈಲ ಮತ್ತು ದ್ವಿದಳ ಧಾನ್ಯಗಳನ್ನು ಕೂಡಾ ಪಡಿತರದ ಮೂಲಕ ವಿತರಿಸಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಅಖಿಲ ಭಾರತ ನ್ಯಾಯಬೆಲೆ ಅಂಗಡಿಗಳ ಒಕ್ಕೂಟ ಮುಂದಿಟ್ಟಿದ್ದು, ಬುಧವಾರದಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನೂ ಭೇಟಿಯಾಗುವ ಉದ್ದೇಶವನ್ನು ಹೊಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...