ಬ್ಯಾಂಕ್ ಗಳಲ್ಲಿ ಖಾತೆ ತೆರೆದ ನಂತ್ರ ಕನಿಷ್ಠ ಬ್ಯಾಲೆನ್ಸ್ ನಿಯಮ ಪಾಲನೆ ಮಾಡಬೇಕು. ಒಂದು ವೇಳೆ ಕನಿಷ್ಠ ಬ್ಯಾಂಕ್ ಬ್ಯಾಲೆನ್ಸ್ ನಿಯಮ ಪಾಲನೆ ಮಾಡಿಲ್ಲವೆಂದ್ರೆ ಬ್ಯಾಂಕ್ ದಂಡ ವಿಧಿಸುತ್ತದೆ. ಸಾರ್ವಜನಿಕ ವಲಯದ ಪಂಜಾಬ್ ನ್ಯಾಷನಲ್ ಬ್ಯಾಂಕ್, ಕಳೆದ 2020-21ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದ ಗ್ರಾಹಕರಿಂದ 170 ಕೋಟಿ ರೂಪಾಯಿ ಶುಲ್ಕವನ್ನು ವಸೂಲಿ ಮಾಡಿದೆ.
ಮಾಹಿತಿ ಹಕ್ಕು ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಬ್ಯಾಂಕ್ ಈ ಮಾಹಿತಿ ನೀಡಿದೆ. 2019-20ರ ಆರ್ಥಿಕ ವರ್ಷದಲ್ಲಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ 286.24 ಕೋಟಿ ರೂಪಾಯಿ ವಸೂಲಿ ಮಾಡಿದೆ.
ಮಧ್ಯಪ್ರದೇಶದ ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಗೌರ್, ಆರ್‌ಟಿಐ ಅಡಿಯಲ್ಲಿ ಬ್ಯಾಂಕಿನಿಂದ ಈ ಬಗ್ಗೆ ಮಾಹಿತಿ ಕೇಳಿದ್ದರು. ಕನಿಷ್ಠ ಬ್ಯಾಲೆನ್ಸ್ ಮಾತ್ರವಲ್ಲ, ಎಟಿಎಂ ಶುಲ್ಕದ ರೂಪದಲ್ಲಿ ಬ್ಯಾಂಕ್ ಹಣ ವಸೂಲಿ ಮಾಡುತ್ತದೆ. ಬ್ಯಾಂಕ್ ಕಳೆದ ಹಣಕಾಸು ವರ್ಷದಲ್ಲಿ 74.28 ಕೋಟಿ ರೂಪಾಯಿಗಳನ್ನು ಎಟಿಎಂ ಶುಲ್ಕದ ರೂಪದಲ್ಲಿ ಸಂಗ್ರಹಿಸಿದ್ದು, 2019-20ರಲ್ಲಿ ಬ್ಯಾಂಕ್ ಈ ಶುಲ್ಕದಲ್ಲಿ 114.08 ಕೋಟಿ ರೂಪಾಯಿ ಸಂಗ್ರಹಿಸಿತ್ತು.