ಬೆಂಗಳೂರು : ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಹಲವು ಸೂಚನೆ ನೀಡಲಾಗಿದೆ.
ಜನರು ವಹಿಸಬೇಕಾದ ಮುನ್ನೆಚ್ಚರಿಕೆಗಳು ಕ್ರಮಗಳ ಇಲ್ಲಿವೆ
- ಕೆಮ್ಮುವಾಗ, ಶೀನುವಾಗ ಕರವಸ್ತ್ರದಿಂದ ಬಾಯಿ, ಮೂಗು ಮುಚ್ಚಿಕೊಳ್ಳಿ
- ಆಗಾಗ ಸೋಪಿನಿಂದ ಕೈ ತೊಳೆಯಿರಿ
- ಜನಸಂದಣಿ ಇರುವೆಡೆ ಮಾಸ್ಕ್ ಧರಿಸಿ
- ಶೀತ-ಜ್ವರ ಬಾಧೆ ಇದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ
- ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರ ಮೇಲೆ ವಿಶೇಷ ಗಮನ ಕೊಡಿ.