ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಯಡಿಯೂರಪ್ಪ ಅವರ ಇಷ್ಟು ವರ್ಷದ ರಾಜಕೀಯ ಜರ್ನಿಯಲ್ಲಿ ಈ ರೀತಿಯಾದ ಆರೋಪಗಳು ಕೇಳಿ ಬಂದಿರಲಿಲ್ಲ. ಇದು ರಾಜ್ಯ ಸರ್ಕಾರದ ಷಡ್ಯಂತ್ರ ಎಂದಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರವೇನು..? ಎಂಬುದು ನನಗೆ ಗೊತ್ತಿಲ್ಲ… ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕಿಸುತ್ತಿದೆ ಎಂದಿದ್ದಾರೆ.