ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 12 ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಸಿಐಡಿಯಿಂದ ನೋಟಿಸ್ ನೀಡಲಾಗಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಗೈರು ಹಾಜರಾಗಿದ್ದರು. ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವುದರಿಂದ ಜೂ. 17ರಂದು ವಿಚಾರಣೆಗೆ ಹಾಜರಾಗುವುದಾಗಿ ಕೋರಿದ್ದರು.ಇಂದು .ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಂತರ ಕೋರ್ಟ್ ಬಂಧಿಸಿದಂತೆ ಆದೇಶ ಹೊರಡಿಸಿತ್ತು. ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿರಲಿಲ್ಲ. ನಂತರ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹಾಗೂ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನಿಗೆ ಕೂಡ ಅವರು ಅರ್ಜಿ ಸಲ್ಲಿಸಿದ್ದರು.