ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 12 ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಸಿಐಡಿಯಿಂದ ನೋಟಿಸ್ ನೀಡಲಾಗಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಗೈರು ಹಾಜರಾಗಿದ್ದರು. ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವುದರಿಂದ ಜೂ. 17ರಂದು ವಿಚಾರಣೆಗೆ ಹಾಜರಾಗುವುದಾಗಿ ಕೋರಿದ್ದರು.