ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಇಂದು ಶ್ರೀಗಳು ಬಿಡುಗಡೆಯಾಗುವ ಸಾಧ್ಯತೆ ಇದೆ.
ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಬಳಿ ಶ್ರೀಗಳ ಪರ ವಕೀಲ ಉಮೇಶ್ ಮಾಹಿತಿ ನೀಡಿ, ಒಂದನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಬಿಡುಗಡೆ ಆದೇಶ ಪ್ರತಿ ಜಿಲ್ಲಾ ಕಾರಾಗೃಹಕ್ಕೆ ತಲುಪಿಸಲಾಗಿದೆ ಎಂದು ಹೇಳಿದ್ದಾರೆ.
ಇಂದು ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಂದ ಕಾನೂನು ಪ್ರಕ್ರಿಯೆ ನಡೆಯಲಿದೆ. ಜಿಲ್ಲಾ ಕಾರಾಗೃಹದ ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಿದ್ದೇನೆ. ಗುರುವಾರ ಪ್ರಕ್ರಿಯೆ ನಡೆಸುವುದಾಗಿ ಹೇಳಿದ್ದಾರೆ. ಗುರುವಾರ ಸಂಜೆಯೊಳಗೆ ಮುರುಘಾ ಶ್ರೀಗಳು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಬಾಡಿ ವಾರೆಂಟ್ ಆದೇಶದ ಮೇಲೆ ಜೈಲಿನಲ್ಲಿ ಇರಿಸಿಕೊಳ್ಳಲು ಅವಕಾಶವಿಲ್ಲ. ಹೀಗಾಗಿ ಗುರುವಾರ ಮರುಘಾ ಶ್ರೀ ಬಿಡುಗಡೆಯಾಗಲಿದ್ದಾರೆ ಎಂದು ವಕೀಲ ಉಮೇಶ್ ತಿಳಿಸಿದ್ದಾರೆ.