alex Certify BIG NEWS: ಪೋಕ್ಸೊ ಕಾಯ್ದೆ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ನೀಡುವುದು ಕಡ್ಡಾಯ; ಹೈಕೋರ್ಟ್‌ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೋಕ್ಸೊ ಕಾಯ್ದೆ ಆರೋಪಿ ಜಾಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರಿಗೆ ಮಾಹಿತಿ ನೀಡುವುದು ಕಡ್ಡಾಯ; ಹೈಕೋರ್ಟ್‌ ಮಹತ್ವದ ಆದೇಶ

ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೊ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ ಜಾಮೀನು ಅರ್ಜಿ‌ ಸಲ್ಲಿಸಿದರೆ, ಈ ಬಗ್ಗೆ ಸಂತ್ರಸ್ತರಿಗೆ ಅಥವಾ ಕೌನ್ಸಿಲ್ ಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಇಂತಹ ದೌರ್ಜನ್ಯಕ್ಕೊಳಗಾದ ಮಕ್ಕಳ ತಾಯಂದಿರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ, ಚೀಫ್ ಜಸ್ಟೀಸ್ ರಿತುರಾಜ್ ಅವಸ್ಥಿ ಹಾಗೂ ಜಸ್ಟೀಸ್ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ ಈ ಮಾರ್ಗಸೂಚಿಯನ್ನು ಹೊರಡಿಸಿದೆ.

ಅರ್ಜಿದಾರರ ಪರ ವಕೀಲರಾದ ರೋಹನ್ ಕೊಠಾರಿ, ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯಿದೆ, 2018 ರ ಸೆಕ್ಷನ್ 439(1)(A) ಪ್ರಕಾರ, ಜಾಮೀನು ಅರ್ಜಿಯನ್ನು ಪರಿಗಣಿಸುವಾಗ ನ್ಯಾಯಾಲಯವು ರಾಜ್ಯಕ್ಕೆ ಮಾತ್ರವಲ್ಲದೆ, ದೂರುದಾರರಿಗೂ ಈ ಬಗ್ಗೆ ಮಾಹಿತಿ ನೀಡುವ ಅಗತ್ಯವಿದೆ. ಇದರಿಂದ ದೂರುದಾರರಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶ ದೊರೆಯುತ್ತದೆ ಎಂದು ಅರ್ಜಿ ಸಲ್ಲಿಸಿದ್ದರು.‌

ಅರ್ಜಿ ವಿಚಾರಿಸಿದ ವಿಭಾಗೀಯ ಪೀಠ, ಐಪಿಸಿ ಸೆಕ್ಷನ್ 376(3), 376-AB, 376-DA ಅಥವಾ 376-DB ಅಥವಾ ಪೋಕ್ಸೋ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾದ ಆರೋಪಿಯು ಜಾಮೀನಿಗೆ ಅರ್ಜಿ ಸಲ್ಲಿಸಿದಾಗ, ತನಿಖಾಧಿಕಾರಿ, ವಿಶೇಷ ಜುವೆನೈಲ್ ಪೊಲೀಸ್ ಘಟಕ (SJPU), ಪಬ್ಲಿಕ್ ಪ್ರಾಸಿಕ್ಯೂಟರ್, ದಾಖಲೆಯಲ್ಲಿರುವ ಯಾವುದೇ ವಕೀಲ ಮತ್ತು ಸಂತ್ರಸ್ತೆ/ದೂರುದಾರ/ಮಾಹಿತಿದಾರರಿಗೆ, ಆರೋಪಿಯಿಂದ ನೋಟಿಸ್ ನೀಡಬೇಕು ಎಂದು ಆದೇಶ ನೀಡಿದೆ.

ಸಂಬಂಧಪಟ್ಟ ತನಿಖಾಧಿಕಾರಿ ಅಥವಾ SJPU ಆರೋಪಿಯು ಜಾಮೀನು ಅರ್ಜಿ ಸಲ್ಲಿಸಿರುವ ಬಗ್ಗೆ ಸಂತ್ರಸ್ತರ ಕೌನ್ಸಿಲ್ ಅಥವಾ ಪೋಷಕರಿಗೆ ಮಾಹಿತಿ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...