ಮಂಗಳೂರು: ವಿಷಕಾರಿ ಅಣಬೆ ತಿಂದು ತಂದೆ, ಮಗ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದಲ್ಲಿ ವಿಷಕಾರಿ ಅಣಬೆ ತಿಂದ ಇಬ್ಬರು ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ಘಟನೆ ನಡೆದಿದ್ದು, ತಂದೆ ಗುರುವಮೆರ(80), ಹಾಗೂ ಮಗ ಓಡಿಯಪ್ಪ(41) ಮೃತಪಟ್ಟವರು ಎಂದು ಹೇಳಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.