ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ವಿದೇಶಿ ಪ್ರದೇಶ ಎಂದು ಪಾಕಿಸ್ತಾನ ಸರ್ಕಾರ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಒಪ್ಪಿಕೊಂಡಿದೆ. ಸ್ಥಳೀಯ ಕಾಶ್ಮೀರಿ ಕವಿ ಮತ್ತು ಪತ್ರಕರ್ತ ಅಹ್ಮದ್ ಫರ್ಹಾದ್ ಶಾ ಅವರ ಅಪಹರಣ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆ ನೀಡಿದೆ.
ಆಜಾದ್ ಕಾಶ್ಮೀರ(POK) ವಿದೇಶಿ ಸರಹದ್ದು. ಆ ದೇಶದಲ್ಲಿ ಇರುವ ವ್ಯಕ್ತಿಯನ್ನು ಪಾಕಿಸ್ತಾನ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಸರ್ಕಾರದ ಪರ ವಕೀಲರು ಇಸ್ಲಾಮಾಬಾದ್ ಹೈಕೋರ್ಟ್ ಗೆ ತಿಳಿಸಿದ್ದಾರೆ.
ಪಿಒಕೆ ನಮಗೆ ಸೇರಿದ್ದು ಎಂದು ಸದಾ ಹೇಳುತ್ತಿದ್ದ ಪಾಕಿಸ್ತಾನ ಸರ್ಕಾರ ಇದೀಗ ಪಿಒಕೆ ನಮ್ಮ ದೇಶವಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದೆ. ಆಜಾದ್ ಕಾಶ್ಮೀರ ವಿದೇಶಿ ಸರಹದ್ದು ಆಗಿದ್ದು, ಆ ದೇಶದ ವ್ಯಕ್ತಿಯನ್ನು ಪಾಕಿಸ್ತಾನ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಸರ್ಕಾರ ಪರ ವಕೀಳರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗಷ್ಟೇ ಗೃಹ ಸಚಿವ ಅಮಿತ್ ಶಾ ಅವರು ನಾವು ಮತ್ತೆ ಗೆದ್ದರೆ ಪಿಒಕೆ ಭಾರತಕ್ಕೆ ಸೇರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪಿಒಕೆ ನಮ್ಮ ದೇಶ ಅಲ್ಲ ಎಂದು ಪಾಕಿಸ್ತಾನ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.