alex Certify ರಸ್ತೆ ದಾಟುವಾಗಲೇ ಕಾದಿತ್ತು ದುರ್ವಿದಿ: ಬಿಜೆಪಿ ವಿಶೇಷ ಸಭೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ದಾಟುವಾಗಲೇ ಕಾದಿತ್ತು ದುರ್ವಿದಿ: ಬಿಜೆಪಿ ವಿಶೇಷ ಸಭೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಾವು

ಶಿವಮೊಗ್ಗ: ನಗರದಲ್ಲಿ ರಾಜ್ಯ ಬಿಜೆಪಿ ವಿಶೇಷ ಸಭೆ ನಡೆಯುತ್ತಿದ್ದು, ಅತಿಗಣ್ಯರು ತಂಗಿದ್ದ ಹೋಟೆಲ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ ಸ್ಟೇಬಲ್ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜುಲ್ಫಿಕರ್(42) ಮೃತಪಟ್ಟವರು ಎಂದು ಹೇಳಲಾಗಿದೆ. ಸಾಗರ ರಸ್ತೆಯ ಹೋಟೆಲ್ ಹರ್ಷದಲ್ಲಿ ಅವರು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಶನಿವಾರ ರಾತ್ರಿ ರಸ್ತೆ ದಾಟುವಾಗ ಅತಿ ವೇಗವಾಗಿ ಬಂದ ಕಾರ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...