alex Certify ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: 3533 ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: 3533 ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಪೊಲೀಸ್ ಇಲಾಖೆಯಿಂದ 3533 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೇ 25 ರಂದು ಬೆಳಗ್ಗೆ 10 ಗಂಟೆಯಿಂದ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್ 28 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 200 ರೂ.,ಉಳಿದವರಿಗೆ 400 ರೂ. ಅರ್ಜಿ ಶುಲ್ಕವಿದೆ. ಪಿಯುಸಿ ಅಥವಾ ತತ್ಸಮಾನ ಸಿಬಿಎಸ್ಸಿ, ಐಸಿಎಸ್ಇ ಮಂಡಳಿ ನಡೆಸುವ 12ನೇ ತರಗತಿ ಪರೀಕ್ಷೆ, NIOS ನಡೆಸುವ ಉನ್ನತ ಪ್ರೌಢಶಿಕ್ಷಣ ಕೋರ್ಸ್,ಹೆಚ್.ಎಸ್.ಎಸಿ., 3 ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಮಾಡಿದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ http://recruitment.ksp.gov.in ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...