
ಬೆಂಗಳೂರು: ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ನಗದು, ಮಾರಕಾಸ್ತ್ರ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಅಭಿಷೇಕ್, ಶರತ್ ಮತ್ತು ಮಧು ಎಂಬುವರನ್ನು ಬಂಧಿಸಿದ್ದಾರೆ.
ಬಂಧಿತರಿಂದ 4 ಲಕ್ಷ ರೂ. ನಗದು ಕೃತ್ಯಕ್ಕೆ ಬಳಸಿದ್ದ ಮಚ್ಚು ಜಪ್ತಿ ಮಾಡಲಾಗಿದೆ. ರಾತ್ರಿ ವೇಳೆ ರಸ್ತೆಯಲ್ಲಿ ಹೊಂಚು ಹಾಕಿ ಕಾಯುತ್ತಿದ್ದ ಆರೋಪಿಗಳು ಒಂಟಿಯಾಗಿ ಬರುವ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದರು.