ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಠಾಣೆ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.
ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಪೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಡಿಗೇಶಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಎಫ್ಐಆರ್ ದಾಖಲಿಸಿದ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.
ಪ್ರಯೋಗದ ಹೆಸರಿನಲ್ಲಿ ನೀರಿಗೆ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ್ದರು. ಭಾರೀ ಸ್ಪೋಟದೊಂದಿಗೆ ನೀರು ಚಿಮ್ಮಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಭಾರಿ ವೈರಲ್ ಆಗಿತ್ತು. ಇದಕ್ಕೆ ಪರಿಸರ ಪ್ರೇಮಿಗಳು ಸೇರಿ ವಿವಿಧ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.