
ಶಿರಸಿ: ಕೃಷಿ, ಕೂಲಿ ಕೆಲಸ ಮಾಡಿಕೊಂಡಿದ್ದ ಕುಟುಂಬ ಸದಸ್ಯರನ್ನು ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಜಗಳೇಮನೆಯಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ. ಆರೋಪಿಗಳು ಜಗಳೇಮನೆಯ ಆದರ್ಶ ಶಾಂತಾರಾಮ್ ನಾಯ್ಕ ಅವರ ಮನೆಯಲ್ಲಿ ಮತಾಂತರಕ್ಕೆ ಪ್ರಯತ್ನ ನಡೆಸಿದ್ದು, ಈ ವೇಳೆ ಸಂಶಯಗೊಂಡ ಗ್ರಾಮಸ್ಥರು ವಿಚಾರಣೆ ನಡೆಸಿದ್ದು, ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿತರನ್ನು ವಶಕ್ಕೆ ಪಡೆದಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.