ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ.
ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ನಿನ್ನೆ ರಾತ್ರಿ ಹಲ್ಲೆ ನಡೆಸಿದ್ದರು. ಬೆಂಗಳೂರು ಯಲಹಂಕ ಬಳಿಯ ಚಿಕ್ಕಬೆಟ್ಟಹಳ್ಳಿಯಲ್ಲಿ ಘಟನೆ ನಡೆದಿತ್ತು. ಸಬ್ ಇನ್ಸ್ಪೆಕ್ಟರ್ ಸೇರಿ ಪೊಲೀಸರ ಮೇಲೆ ಮನಸೋಇಚ್ಚೆ ಹಲ್ಲೆ ನಡೆಸಿದ ಪುಂಡರು ಪರಾರಿಯಾಗಿದ್ದರು.
ರಸ್ತೆಯಲ್ಲಿ ಗುಂಡಿಬಿದ್ದ ಕಾರಣ ಒಂದು ಕಡೆ ರಸ್ತೆ ಬ್ಲಾಕ್ ಮಾಡಲಾಗಿತ್ತು. ಹೀಗಾಗಿ ಒನ್ ವೇನಲ್ಲಿ ಬಂದ ಬೈಕ್ ಸವಾರನನ್ನು ನೈಟ್ ರೌಂಡ್ಸ್ ನಲ್ಲಿದ್ದ ಪೊಲೀಸರು ಪ್ರಶ್ನೆ ಮಾಡಿದ್ದರು. ಪೊಲೀಸರು ಮತ್ತು ವ್ಯಕ್ತಿಯ ನಡುವೆ ವಾಗ್ವಾದ ನಡೆದು ಪೊಲೀಸರು ಎಂದು ತಿಳಿಸಿದರೂ ಹಲ್ಲೆ ಮಾಡಿ ಪರಾರಿಯಾಗಿದ್ದರು.
ಇನ್ನು ಪೊಲೀಸರ ಮೇಲೆ ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸುವಂತೆ ಗೃಹಸಚಿವ ಆರಗ ಜ್ಞಾನೇಂದ್ರ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ರೌಂಡ್ಸ್ ನಲ್ಲಿದ್ದ ಪಿಎಸ್ಐ, ಪೊಲೀಸರ ಮೇಲೆ ನಡೆಸಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಮಿಷನರ್ ಗೆ ಗೃಹಸಚಿವರು ನಿರ್ದೇಶನ ನೀಡಿದ್ದಾರೆ. ಹಲ್ಲೆಗೊಳಗಾದ ಪೊಲೀಸರಿಗೆ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದಾರೆನ್ನಲಾಗಿದೆ.