ಬೆಂಗಳೂರು: ಸಂಚಾರ ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಚಾಲಕರು ನೈಸ್ ರಸ್ತೆಯನ್ನು ಬ್ಲಾಕ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ಪಿಇಎಸ್ ಕಾಲೇಜು ಸಮೀಪ ನೈಸ್ ರಸ್ತೆಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ 8.30 ರ ಸುಮಾರಿಗೆ ಘಟನೆ ನಡೆದಿದ್ದು, ನೈಸ್ ರಸ್ತೆ ಮತ್ತು ಸರ್ವಿಸ್ ರಸ್ತೆಗಳನ್ನು ಬ್ಲಾಕ್ ಮಾಡಿ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಚಾಲಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಪರಿಸ್ಥಿತಿ ತಿಳಿಯಾಗಿದೆ ಎನ್ನಲಾಗಿದೆ.