ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಫೋಟೋ ಇರುವ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಆರೋಪಿಗಳಿಗೆ ಪೊಲೀಸರು ತೀವ್ರವಾಗಿ ಥಳಿಸಿದ್ದಾರೆ. ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ತನಿಖೆಗೆ ಆದೇಶಿಸಿದ್ದಾರೆ.
ಪೊಲೀಸರಿಂದ ತೀವ್ರ ಹಲ್ಲೆಗೊಳಗಾದ ಆರೋಪಿಗಳಲ್ಲಿ ಕೆಲವರು ನಡೆಯಲು ಆಗದಂತಹ ಸ್ಥಿತಿಯಲ್ಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಕೆಲವರಿಗೆ ಜಾಮೀನು ಕೊಡಿಸಿದ್ದಾರೆ.
ಆರೋಪಿಗಳಲ್ಲಿ ಕೆಲವರಿಗೆ ನಡೆದಾಡಲು ಕಷ್ಟಪಡುವಂತಾಗಿದೆ. ಕೆಲವರು ಗಂಭೀರ ಗಾಯಗೊಂಡಿರುವುದಾಗಿ ಹೇಳಲಾಗಿದೆ. ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಂಡಿಸಿದ್ದು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಹೇಳಿದ್ದಾರೆ.