ಗ್ರೇಟರ್ ನೋಯ್ಡಾ ಸೆಕ್ಟರ್ 61 ರ ಮಾಲ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 7 ಮಂದಿಯನ್ನು ಬಂಧಿಸಲಾಗಿದೆ. ದಾಳಿಯ ವೇಳೆ ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ 14 ಮಹಿಳೆಯರನ್ನು ರಕ್ಷಿಸಲಾಗಿದೆ.
ದಾಳಿಯ ಸಂದರ್ಭದಲ್ಲಿ ಸ್ಪಾದಲ್ಲಿ ಮಾದಕ ದ್ರವ್ಯಗಳು ಕೂಡ ಕಂಡು ಬಂದಿವೆ. ಸ್ಪಾ ಮಾಲೀಕನನ್ನು ಬಂಧಿಸಲಾಗಿದೆ ಎಂದು ಗ್ರೇಟರ್ ನೋಯ್ಡಾ ಹೆಚ್ಚುವರಿ ಡಿಸಿಪಿ ಆರ್. ಸಿಂಗ್ ಮಾಹಿತಿ ನೀಡಿದ್ದಾರೆ.