alex Certify ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 14 ಮಹಿಳೆಯರ ರಕ್ಷಣೆ, ದಂಧೆಯಲ್ಲಿ ತೊಡಗಿದ್ದ 7 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 14 ಮಹಿಳೆಯರ ರಕ್ಷಣೆ, ದಂಧೆಯಲ್ಲಿ ತೊಡಗಿದ್ದ 7 ಮಂದಿ ಅರೆಸ್ಟ್

ಗ್ರೇಟರ್ ನೋಯ್ಡಾ ಸೆಕ್ಟರ್ 61 ರ ಮಾಲ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 7 ಮಂದಿಯನ್ನು ಬಂಧಿಸಲಾಗಿದೆ. ದಾಳಿಯ ವೇಳೆ ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ 14 ಮಹಿಳೆಯರನ್ನು ರಕ್ಷಿಸಲಾಗಿದೆ.

ದಾಳಿಯ ಸಂದರ್ಭದಲ್ಲಿ ಸ್ಪಾದಲ್ಲಿ ಮಾದಕ ದ್ರವ್ಯಗಳು ಕೂಡ ಕಂಡು ಬಂದಿವೆ. ಸ್ಪಾ ಮಾಲೀಕನನ್ನು ಬಂಧಿಸಲಾಗಿದೆ ಎಂದು ಗ್ರೇಟರ್ ನೋಯ್ಡಾ ಹೆಚ್ಚುವರಿ ಡಿಸಿಪಿ ಆರ್. ಸಿಂಗ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...