ಬೆಂಗಳೂರು: ಓಲಾ ಕ್ಯಾಬ್ ಚಾಲಕ ಮಹಿಳೆ ಎದುರಲ್ಲೇ ಅಶ್ಲೀಲವಾಗಿ ವರ್ತಿಸಿದ ಘಟನೆ ನಡೆದಿದ್ದು, ಸಂತ್ರಸ್ತೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನು ಆಧರಿಸಿ ಪೊಲೀಸರು ಕೂಡ ಕ್ರಮ ಕೈಗೊಂಡಿದ್ದಾರೆ
ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಲು ಸಂತ್ರಸ್ತೆ ಓಲಾ ಕ್ಯಾಬ್ ಬುಕ್ ಮಾಡಿದ್ದು, ಮನೆಗೆ ತೆರಳುವಾಗ ಚಾಲಕ ಅಶ್ಲೀಲವಾಗಿ ವರ್ತಿಸಿದ್ದಾನೆ. ಮಹಿಳೆ ಆತನನ್ನು ಗಮನಿಸಿದಾಗ ಬಟ್ಟೆಯಿಂದ ಮುಚ್ಚಿಕೊಂಡಿದ್ದಾನೆ. ಈ ವೇಳೆ ಮಹಿಳೆ ಕೂಗಾಡಿ ಕ್ಯಾಬ್ ನಿಲ್ಲಿಸಿ ಕೆಳಗಿಳಿದಿದ್ದಾರೆ. ಬೇರೆ ಕ್ಯಾಬ್ ನಲ್ಲಿ ಮನೆಗೆ ತೆರಳಿದ್ದಾರೆ. ಮಹಿಳೆಯರ ಸುರಕ್ಷತೆಗೆ ಒತ್ತು ನೀಡಬೇಕು. ಕ್ಯಾಬ್ ಗಳಲ್ಲಿ ಒಬ್ಬರೇ ಹೋಗುವಾಗ ಪರಿಚಿತರ ಸಂಪರ್ಕದಲ್ಲಿರುವ ಜೊತೆಗೆ ಲೈವ್ ಲೊಕೇಷನ್ ಶೇರ್ ಮಾಡಬೇಕು ಎಂದು ತಿಳಿಸಿದ್ದಾರೆ.
ಓಲಾ ಕ್ಯಾಬ್ ಕಂಪನಿಗೆ ದೂರು ನೀಡಲಾಗಿದ್ದು, ಚಾಲಕನನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ಸಂತ್ರಸ್ತೆ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿ ಬಂಧನಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.