ನವದೆಹಲಿ: ಖ್ಯಾತ ಚಲನಚಿತ್ರ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. ಏಕ್ತಾ ತನ್ನ ಜನಪ್ರಿಯ ಸರಣಿ ‘ಗಾಂಡಿ ಬಾತ್’ ನಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ಈ ವಿವಾದಾತ್ಮಕ ವೆಬ್ ಸರಣಿಯ ಇದುವರೆಗೆ 6 ಸೀಸನ್‌ಗಳು ಬಿಡುಗಡೆಯಾಗಿದ್ದು, ಈ ಸರಣಿಯನ್ನು ಬ್ಯಾನ್ ಮಾಡಬೇಕೆಂದು ಬಾರಿ ಒತ್ತಾಯ ಬಂದಿದೆ.
ಒಟಿಟಿ ಪ್ಲಾಟ್‌ಫಾರ್ಮ್ ಆಲ್ಟ್ ಬಾಲಾಜಿ ಅವರ ‘ಗಾಂಡಿ ಬಾತ್’ ವೆಬ್ ಸರಣಿಯ ಸಂಚಿಕೆಯಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ದೃಶ್ಯಗಳನ್ನು ತೋರಿಸಿದ್ದಕ್ಕಾಗಿ ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ಕಾನೂನು ಸಮಸ್ಯೆಗೆ ಸಿಲುಕಿದ್ದಾರೆ.
ಆಲ್ಟ್ ಬಾಲಾಜಿ ಟೆಲಿಫಿಲ್ಮ್ ಲಿಮಿಟೆಡ್‌ನ ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಮುಂಬೈನ ಎಂಹೆಚ್‌ಬಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295-ಎ, ಐಟಿ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 13 ಮತ್ತು 15 ರ ಅಡಿಯಲ್ಲಿ ಅಪ್ರಾಪ್ತ ಬಾಲಕಿಯರ ಅಶ್ಲೀಲ ದೃಶ್ಯಗಳನ್ನು ತೋರಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.