ಶಿವಮೊಗ್ಗ: ಪೊಲೀಸ್ ಇಲಾಖೆಯ ಅರಣ್ಯ ಸಂಚಾರಿ ದಳದ ಮಹಿಳಾ ಸಿಬ್ಬಂದಿಯ ಮೇಲೆ ಮಾನಭಂಗ ಯತ್ನ ಆರೋಪ ಹಿನ್ನೆಲೆಯಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ.
ನೊಂದ ಮಹಿಳಾ ಸಿಬ್ಬಂದಿ ಕಿರುಕುಳ, ಮಾನಭಂಗ ಯತ್ನ ಆರೋಪದಡಿ ಸಾಗರದ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಜೀವನ್ ಬಿಮಾನಗರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನಂದ ಪಾಟೀಲ್ ಎಂಬುವನ ವಿರುದ್ಧ ಕ್ರಿಮಿನಲ್ ಪ್ರಕರಣದ ವಿಚಾರಣೆಯನ್ನು ಭದ್ರಾವತಿ ನ್ಯೂಟನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.
ನಾನು ಸಾಗರ ಠಾಣೆಗೆ ವರ್ಗಾವಣೆಯಾಗಿ ಬಂದ ನಂತರ ಮಾಹಿತಿ ಕಲೆ ಹಾಕಲು ಮುಂದಾದ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ತಮ್ಮ ವಿರುದ್ಧ ಗ್ರಾಮದಲ್ಲಿ ಅಪಪ್ರಚಾರ ಮಾಡಿದ್ದಾರೆ. ವಿಚಾರಣೆಗೆ ಬಂದ ಸಂದರ್ಭದಲ್ಲಿ ಸಿಬ್ಬಂದಿಯೊಬ್ಬ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.