alex Certify ಫೆ.25ರಂದು ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ : ನಿಷೇಧಾಜ್ಞೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ.25ರಂದು ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಕೊಪ್ಪಳ : ಮಿಕ್ಕುಳಿದ ವೃಂದದ ಪೊಲೀಸ್ ಕಾನ್ಸ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಮತ್ತು (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್ ಲಾಗ್-1137 ಹುದ್ದೆಗಳ ನೇಮಕಾತಿ ಪರೀಕ್ಷೆಯು ಫೆಬ್ರವರಿ 25 ರಂದು ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಪೇದೆ ಪರೀಕ್ಷೆಯು ಫೆಬ್ರವರಿ 25ರ ಬೆಳಿಗ್ಗೆ 11 ರಿಂದ ಮದ್ಯಾಹ್ನ 12.30 ರವರೆಗೆ ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜ್, ಸರಕಾರಿ ಬಾಲಕಿಯರ ಪಿಯು ಕಾಲೇಜ್(ಹೊಸ ಕಟ್ಟಡ), ಸರಕಾರಿ ಬಾಲಕಿಯರ ಪಿಯು ಕಾಲೇಜ್ (ಪ್ರೌಢಶಾಲೆ ವಿಭಾಗ), ಭಾಗ್ಯನಗರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗ) ಹಾಗೂ ನ್ಯಾಷನಲ್ ಹೈಸ್ಕೂಲ್ ಮತ್ತು ಗದಗ ರಸ್ತೆಯ (ಮಂಗಳಾಪೂರ ಕ್ರಾಸ್) ನ್ಯೂ ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಸೇರಿದಂತೆ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...