ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಹಾಂತೇಶ ಮತ್ತು ಮಂಜುನಾಥ ಅವರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಹುಬ್ಬಳ್ಳಿಯ ಒಂದನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಪೊಲೀಸರು ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್ 6 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಜುಲೈ 5 ರಂದು ಹುಬ್ಬಳ್ಳಿಯ ಹೋಟೆಲ್ ನಲ್ಲಿ ಆರೋಪಿಗಳು ಚಾಕುವಿನಿಂದ ಚಂದ್ರಶೇಖರ ಗುರೂಜಿಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು.