ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದಾರೆ.
ರೇಣುಕಾಸ್ವಾಮಿಯನ್ನು ಅಪಹರಣ ಮಾಡಿ ಕರೆದುಕೊಂಡು ಹೋಗಿದ್ದಾರೆ. ಎಲ್ಲಾ ಕಡೆ ಮಹಜರು ನಡೆಸಬೇಕಿದೆ. ಕೊಲೆಯಾದ ಸ್ಥಳ, ಶವ ಎಸೆದ ಜಾಗದಲ್ಲಿ ಮಹಜರು ನಡೆಸಬೇಕಿದೆ. ಮೊಬೈಲ್ ಡೇಟಾ ಸಂಗ್ರಹಿಸಬೇಕು. ಆಯುಧ ಜಪ್ತಿ ಮಾಡಬೇಕು. ದರ್ಶನ್ ಸೆಲೆಬ್ರಿಟಿ ಆಗಿರುವುದರಿಂದ ಸಾಕ್ಷ ನಾಶಪಡಿಸುವ ಸಾಧ್ಯತೆ ಇದೆ. ಹಾಗಾಗಿ ಅವರನ್ನು 14 ದಿನ ಕಸ್ಟಡಿಗೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.
ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದೆ. ನ್ಯಾಯಾಧೀಶರು ಎಲ್ಲಾ ಆರೋಪಿತರ ಹೆಸರುಗಳನ್ನು ಕೇಳಿದ್ದಾರೆ.