
ಬೆಂಗಳೂರು: ನಾಪತ್ತೆಯಾಗಿದ್ದ ಪೊಲೀಸ್ ಕಾನ್ ಸ್ಟೆಬಲ್ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ವಿವಿ ಆವರಣದ ಬಾವಿಯಲ್ಲಿ ಶವ ಪತ್ತೆಯಾಗಿದೆ.
ಮಡಿವಾಳ ಠಾಣೆಯ ಕಾನ್ ಸ್ಟೆಬಲ್ ಶಿವರಾಜ್(29) ಮೃತಪಟ್ಟವರು. ಜೂನ್ 26 ರಂದು ಮನೆಯಿಂದ ನಾಪತ್ತೆಯಾಗಿದ್ದ ಅವರ ಶವ ಪತ್ತೆಯಾಗಿದೆ. ಮೂರು ತಿಂಗಳ ಹಿಂದೆ ಅವರಿಗೆ ಮದುವೆಯಾಗಿತ್ತು.
ಶಿವರಾಜ್ ಅವರ ಸಹೋದರ ಮತ್ತು ಆತನ ಪತ್ನಿ ಕೌಟುಂಬಿಕ ಕಲಹದಿಂದ ದೂರವಾಗಿದ್ದು, ಶಿವರಾಜ್ ಕುಟುಂಬದವರ ವಿರುದ್ಧ ಸೋದರನ ಪತ್ನಿ ದಾವಣಗೆರೆಯಲ್ಲಿ ವರದಕ್ಷಿಣೆ ಕಿರುಕುಳ ದೂರು ನೀಡಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕರ್ತವ್ಯಕ್ಕೆ ತೆರಳಿದ್ದ ಶಿವರಾಜ್ ನಾಪತ್ತೆಯಾಗಿದ್ದು, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಲಾಗಿತ್ತು.