ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳು, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಜಿಲ್ಲಾ ಪೊಲೀಸರು ಪ್ರವಾಸಿಗರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಅಣೆಕಟ್ಟು, ಜಲಪಾತಗಳು ಹಾಗೂ ನದಿಗೆ ಇಳಿಯಬಾರದು ಈಜಾಡುವುದು, ಸೆಲ್ಫಿ ತೆಗೆದುಕೊಳ್ಳದಂತೆ ಸೂಚನೆ ನೀಡಿದ್ದಾರೆ.
ನೀರಿನ ಹರಿವು ಕಡಿಮೆ ಆಗುವವರೆಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಪೊಲೀಸರು ಮಾಹಿತಿ ನೀಡಿದ್ದು, ಪ್ರವಾಸಿ ತಾಣಗಳ ಬಳಿ ಪೊಲೀಸ್ ಇಲಾಖೆ ಸೂಚನಾ ಫಲಕಗಳನ್ನು ಅಳವಡಿಸಿದೆ. ಅಲ್ಲದೆ ಪ್ರವಾಸಿ ತಾಣಗಳ ಬಳಿ ಕರ್ತವ್ಯಕ್ಕೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.