ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 7 ನಕಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ.
ಪಶ್ಚಿಮ ವಿಭಾಗದಲ್ಲಿ ಇಬ್ಬರು ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ. ದಕ್ಷಿಣ ವಿಭಾಗದಲ್ಲಿ ಕೂಡ ಇಬ್ಬರು ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದು, ಪೂರ್ವ ವಿಭಾಗದಲ್ಲಿ ಮೂವರು ನಕಲಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಶೃಂಗೇರಿ ಠಾಣೆ ಕಾನ್ ಸ್ಟೇಬಲ್ ಸೇರಿದಂತೆ 7 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.
17,940 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ 36 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಹಾಜರಾಗಿರುವುದು ತಪಾಸಣೆಯ ವೇಳೆ ಬೆಳಕಿಗೆ ಬಂದಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆನ್ನಲಾಗಿದೆ.