alex Certify BIG BREAKING: ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯುತ್ತಿದ್ದ ಪೊಲೀಸ್ ಸೇರಿ 7 ನಕಲಿ ಅಭ್ಯರ್ಥಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯುತ್ತಿದ್ದ ಪೊಲೀಸ್ ಸೇರಿ 7 ನಕಲಿ ಅಭ್ಯರ್ಥಿಗಳು ಅರೆಸ್ಟ್

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 7 ನಕಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ.

ಪಶ್ಚಿಮ ವಿಭಾಗದಲ್ಲಿ ಇಬ್ಬರು ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ. ದಕ್ಷಿಣ ವಿಭಾಗದಲ್ಲಿ ಕೂಡ ಇಬ್ಬರು ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದು, ಪೂರ್ವ ವಿಭಾಗದಲ್ಲಿ ಮೂವರು ನಕಲಿ ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಶೃಂಗೇರಿ ಠಾಣೆ ಕಾನ್ ಸ್ಟೇಬಲ್ ಸೇರಿದಂತೆ 7 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

17,940 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ 36 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳು ಹಾಜರಾಗಿರುವುದು ತಪಾಸಣೆಯ ವೇಳೆ ಬೆಳಕಿಗೆ ಬಂದಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...