alex Certify ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ಸ್ ಟೆಬಲ್ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ಸ್ ಟೆಬಲ್ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರದ ತಹಸಿಲ್ ಕಚೇರಿ ಕಟ್ಟಡದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಲಿಕಾರ್ಜುನ ಪತ್ತೆಪೂರ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಆಗಿದ್ದಾರೆ. ಗುರುವಾರ ಬೆಳಗಿನ ಜಾವ 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಸ ಗುಡಿಸುವವರು ಕಟ್ಟಡದ ಮೇಲೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಮಲ್ಲಿಕಾರ್ಜುನ ಗಂಟಲಿನ ಮೂಲಕ ನುಗ್ಗಿದ ಗುಂಡು ನೆತ್ತಿಯ ಮೂಲಕ ಹೊರ ಬಂದಿದೆ. ಕೈಯಲ್ಲಿ ಬಂದೂಕು ಹಿಡಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ ಬೆಳಗಿನ ಜಾವ ಮೂರು ಗಂಟೆಗೆ ತಹಶೀಲ್ ಕಚೇರಿಗೆ ಬಂದಿದ್ದು, ಜೊತೆಗಿದ್ದವರಿಗೆ ಸ್ವಲ್ಪ ಮೇಲೆ ಹೋಗಿ ಬರುತ್ತೇನೆ ಎಂದು ಕಟ್ಟಡದ ಮೇಲೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...